ಅಕ್ಟೋಬರ್ 07 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ

0
26

ಹುಬ್ಬಳ್ಳಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಅಕ್ಟೋಬರ್ 7 ರಂದು ಬೆಂಗಳೂರಲ್ಲಿ ನಡೆಯಲಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರಭಾರಿ ಡಿ.ಕೆ.ಅರುಣಾ, ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ, ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಪ್ರಯುಕ್ತ ಸೆ.17 ರಿಂದ ಅಕ್ಟೋಬರ್ 02 ರವರೆಗೆ ಸೇವಾ ಪಾಕ್ಷಿಕ ಅಭಿಯಾನವನ್ನು ದೇಶವ್ಯಾಪಿ ಹಮ್ಮಿಕೊಂಡಿದೆ ಎಂದರು.
ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ ಶಿಬಿರ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ, ಫಲಾನುಭವಿಗಳಿಂದ ಪ್ರಧಾನಿಗೆ ಪತ್ರ ಬರೆಯುವುದು, ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಅಡುಗೆ ಮಾಡುವುದು, ಸನ್ಮಾನ ಮಾಡುವುದು, ಕೆರೆಗಳ ಸ್ವಚ್ಚತೆ ಕುರಿತ ಅಮೃತ ಸರೋವರ ಯೋಜನೆಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಕೈ ಜೋಡಿಸಿ ಕೆಲಸ ಮಾಡುವುದು ಸೇರಿದಂತೆ ಹಲವು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಕೇಕ್ ಕತ್ತರಿಸುವುದಿಲ್ಲ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು, ಕೇಕ್ ಕತ್ತರಿಸುವುದು, ಅಬ್ಬರದ ಅಚರಣೆ ಇರುವುದಿಲ್ಲ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಸಂಜಯ ಕಪಟಕರ, ಪಾಲಿಕೆ ಸದಸ್ಯ ವಿಜಯಾನಂದ ಶೆಟ್ಟಿ, ಪಕ್ಷದ ಮುಖಂಡರಾದ ಸಿದ್ದು ಮೊಗಲಿ ಶೆಟ್ಟರ, ರವಿ ನಾಯಕ ಗೋಷ್ಠಿಯಲ್ಲಿದ್ದರು.

Previous articleಉಣಕಲ್ ರಾಮಲಿಂಗೇಶ್ವರ ದೇವಸ್ಥಾನ ಜಾಗೆ ಬಿಆರ್ ಟಿಎಸ್ ಸುಪರ್ದಿಗೆ
Next articleನಟಿ ಶ್ರೀ ಲೀಲಾ ತಾಯಿ ಮೇಲೆ ಎಫ್​ಐಆರ್​​​..!