Home Advertisement
Home ಅಪರಾಧ ಅಕ್ರಮವಾಗಿ ಸಾಗಿಸುತ್ತಿದ್ದ 3.88 ಲಕ್ಷ ನಗದು ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ 3.88 ಲಕ್ಷ ನಗದು ವಶಕ್ಕೆ

0
76
ಹುಕ್ಕೇರಿ

ಬೆಳಗಾವಿ: ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 3,88,500 ನಗದು ಹಣವನ್ನು ಎಫ್‌ಎಸ್‌ಟಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೈರಾಪುರ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.
ಕೊಲ್ಲಾಪುರದ ಜಮಾದಾರ ಎನ್ನುವ ವ್ಯಕ್ತಿಯು 3,88,500 ನಗದು ಹಣವನ್ನು ಸಾಗಾಟ ಮಾಡುತ್ತಿದ್ದ ವೇಳೆಯಲ್ಲಿ ಬೈರಾಪೂರ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ಎಫ್‌ಎಸ್‌ಟಿ ಅಧಿಕಾರಿಗಳು ಹಾಗೂ ಪೊಲೀಸರು ಈ ವೇಳೆ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಂಕೇಶ್ವರ ಸಿಪಿಐ ಪ್ರಹ್ಲಾದ ಚೆನ್ನಗೇರಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕುರಿತು ಸಂಕೇಶ್ವರ ಪೊಲೀಸ್‌ ಠಾಣೆಯಲ್ಲಿ ಸಿಆರ್‌ನಂ-103/23 ಯು/ಎಸ್ 98 ಕೆಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲು ಮಾಡಲಾಗಿದೆ.

Previous articleಕೆಲವೇ ಗಂಟೆಗಳಲ್ಲಿ ಬಿಜೆಪಿ ಫಸ್ಟ್‌ ಲಿಸ್ಟ್‌
Next articleದಾಖಲೆ ಇಲ್ಲದ 50 ಲಕ್ಷ ನಗದು ವಶ