Home ಅಪರಾಧ ಅಕ್ರಮ ಕಸಾಯಿಖಾನೆ ಮೇಲೆ ದಾಳಿ: ಇಬ್ಬರು ಆರೋಪಿಗಳು ವಶಕ್ಕೆ

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: ಇಬ್ಬರು ಆರೋಪಿಗಳು ವಶಕ್ಕೆ

0

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಾದ ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಉಮರಬ್ಬ(42), ಪಡಂಗಡಿ ಗ್ರಾಮದ ಪೆರ್ಣಮಂಜ ನಿವಾಸಿ ಕರೀಂ(34) ಎಂಬವರನ್ನು ಬಂಧಿಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಅನ್ವರ್ ಎಂಬಾತನಿಗೆ ಸೇರಿದ ಜಾಗದಲ್ಲಿ ಅನಧಿಕೃತ ಕಸಾಯಿಖಾನೆಯಲ್ಲಿ ಇಬ್ಬರು ಸೇರಿ ದನವನ್ನು ವಧೆ ಮಾಡುವಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು, ಸ್ಥಳದಲ್ಲಿ ಸುಮಾರು 85 ಕೆಜಿ ದನದ ಮಾಂಸ, ಕತ್ತಿ, ಒಂದು ಬೊಲೆರೋ ವಾಹನ ವಶಪಡಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪಶು ವೈದ್ಯಾಧಿಕಾರಿ ರವಿಕುಮಾರ್ ಪರಿಶೀಲನೆ ನಡೆಸಿದ್ದಾರೆ.

Exit mobile version