Home ತಾಜಾ ಸುದ್ದಿ ಅತ್ಯಾಚಾರಿಗಳನ್ನು ಕಂಡಲ್ಲಿ ಗುಂಡಿಕ್ಕಿ

ಅತ್ಯಾಚಾರಿಗಳನ್ನು ಕಂಡಲ್ಲಿ ಗುಂಡಿಕ್ಕಿ

0

ಬೆಂಗಳೂರು: ಅತ್ಯಾಚಾರಿಗಳನ್ನು ಕಂಡಲ್ಲಿ ಗುಂಡಿಕ್ಕಿ ಎಂದು ಶಾಸಕ ಬಸನಗೌಡ ಪಾಟೀಲ್ ಹೇಳಿದ್ದಾರೆ.
ತುಮಕೂರು ಸಿದ್ದಗಂಗಾ ಮಠದ ಜಾತ್ರೆಗೆ ಬಂದಿಂದ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ತುಮಕೂರಿನಲ್ಲಿ ಜಾತ್ರೆಗೆ ಬಂದಿದ್ದ ಬಾಲಕಿ ಓರ್ವಳ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಅತ್ಯಂತ ಹೇಯ ಹಾಗೂ ಪೈಶಾಚಿಕ ಕೃತ್ಯ. ಕಾಂಗ್ರೆಸ್ ಆಳ್ವಿಕೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೆ ಜ್ವಲಂತ ಉದಾಹರಣೆ. ಅತ್ಯಾಚಾರಿಗಳನ್ನು ಕಂಡಲ್ಲಿ ಗುಂಡಿಕ್ಕಿ ಮುಂದೆಂದೂ ಈ ರೀತಿಯ ಕೃತ್ಯವಾಗದೆ ಇರದಂತೆ ಪೊಲೀಸರು ಕಾರ್ಯಾಚರಣೆ ನಡೆಸಲಿ ಎಂದಿದ್ದಾರೆ.

Exit mobile version