ಅತ್ಯಾಚಾರ ಆರೋಪ: ನಟ ಮಡೆನೂರು ಮನು ಪೊಲೀಸರ ವಶಕ್ಕೆ

0
30

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ನಟ ಮಡೆನೂರು ಮನುವನ್ನು ಪೊಲೀಸರು ಬಂಧಿಸಿದ್ದಾರೆ.
ಕಾಮಿಡಿ ಕಿಲಾಡಿ ಸ್ಟಾರ್‌ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ನಟನ ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದ್ದು. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸಿ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಯ ಮಡೆನೂರಿನಲ್ಲಿ ಮನು ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Previous articleಮೋದಿ ಅಪಮಾನಿಸಿ ಪೋಸ್ಟ್: ಯುವಕನನ್ನು ವಶಕ್ಕೆ ಪಡೆದ ಪೊಲೀಸರು
Next articleಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ ಅಧಿಕಾರಿ