Home Advertisement
Home ತಾಜಾ ಸುದ್ದಿ ಅಧಿಕಾರ ಎನ್ನುವುದು ಜವಾಬ್ದಾರಿಯೇ ಹೊರತು ಪಾಳೆಗಾರಿಕೆ…

ಅಧಿಕಾರ ಎನ್ನುವುದು ಜವಾಬ್ದಾರಿಯೇ ಹೊರತು ಪಾಳೆಗಾರಿಕೆ…

0
92

ಬೆಂಗಳೂರು: ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ ಎಂದು ಆರ್. ಅಶೋಕ್ ಹೇಳಿದ್ದಾರೆ.
ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು – ಡಿಸಿಎಂ ಸಾಹೇಬರ ಲೇಟೆಸ್ಟ್ ನುಡಿಮುತ್ತುಗಳು. ಸನ್ಮಾನ್ಯ ಡಿ. ಕೆ. ಶಿವಕುಮಾರ ಅವರೇ, ನಿಮ್ಮ ಬಳಿ ತಗ್ಗಿ-ಬಗ್ಗಿ ಇರಬೇಕು ಅನ್ನುವುದಕ್ಕೆ ಬೆಂಗಳೂರು ನಗರವನ್ನು ನಿಮ್ಮ ಜಹಗೀರು ಅಂದುಕೊಡಿದ್ದೀರಾ? ಅಧಿಕಾರ ಎನ್ನುವುದು ಮತದಾರರು ಕೊಟ್ಟಿರುವ ಭಿಕ್ಷೆ, ಸಂವಿಧಾನ ಕೊಟ್ಟಿರುವ ಜವಾಬ್ದಾರಿಯೇ ಹೊರತು ಪಾಳೆಗಾರಿಕೆ ಅಲ್ಲ. ಪ್ರಜಾಪ್ರಭುತ್ವದಲ್ಲಿ ನಾವು ತಗ್ಗಿ-ಬಗ್ಗಿ ನಡೆಯಬೇಕಿರುವುದು ಮತಭಿಕ್ಷೆ ನೀಡಿರುವ ಮತದಾರ ಪ್ರಭುಗಳಿಗೆ, ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿರುವ ಸಂವಿಧಾನಕ್ಕೆ ಹೊರತು ಯಾವ ದೊಣ್ಣೆ ನಾಯಕನಿಗೂ ಅಲ್ಲ. ಈ ನಿಮ್ಮ ಒಣ ಪ್ರತಿಷ್ಠೆ, ಧಿಮಾಕು, ದರ್ಬಾರು ಎಲ್ಲ ಬಿಟ್ಟು ಜನರ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಿ. ಯಾವುದೇ ಕ್ಷೇತ್ರದ ಬಗ್ಗೆ ತಾರತಮ್ಯ ಮಾಡದೆ ಸಚಿವರಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ ಎಂದಿದ್ದಾರೆ.

Previous articleಜೆ.ಪಿ.ಸಿ ಅಧ್ಯಕ್ಷರು ಭೇಟಿ ನೀಡುತ್ತಿರುವುದು ವಿಜಯಪುರಕ್ಕೆ, ಇಸ್ಲಾಮಾಬಾದ್‌ಗಲ್ಲ
Next articleಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ