ಅಪಘಾತ: ಒಂದೇ ಕುಟುಂಬದ ಮೂವರು ಸಾವು

0
13

ಹಾವೇರಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿ ನಡೆದಿದೆ.
ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಒಂದು ಮಗು ಮೃತಪಟ್ಟಿದೆ. ಇನ್ನೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಇವರು ಒಂದೇ ಕುಟುಂಬದವರಾಗಿದ್ದು, ತಂದೆ-ತಾಯಿ ಮತ್ತು ಇಬ್ಬರು ಮಕ್ಕಳಿರಬೇಕು ಎನ್ನಲಾಗಿದೆ.
ಮೊಟೇಬೆನ್ನೂರು ಬಳಿ ಬೈಕ್‌ನಲ್ಲಿ ಸಾಗುತ್ತಿದ್ದಾಗ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿಯೊಂದು ಹಿಂಬದಿಯಿಂದ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಮೃತದೇಹಗಳು ಛೀದ್ರ ಛಿದ್ರವಾಗಿದ್ದವು, ಬೈಕ್‌ನಲ್ಲಿ ಸವಾರಿ ಮಾಡುತ್ತಿದ್ದ ಮೂವರು ನರಳಾಡಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

Previous articleರಾಜ್ಯಸಭೆಯಲ್ಲಿ 3 ಸ್ಥಾನ ಗೆದ್ದ ಕಾಂಗ್ರೆಸ್‌, 1 ಸ್ಥಾನ ಬಿಜೆಪಿಗೆ: ಮೈತ್ರಿಗೆ ಮತ್ತೊಂದು ಸೋಲು…!
Next articleಬಣವೆಗೆ ಬೆಂಕಿ, ಆರಿಸಲು ಹೋದ ರೈತ ಸಜೀವ ದಹನ