ಅಪಘಾತ – ಯುವ ವೈದ್ಯ ಸಾವು

0
43

ಸಂ. ಕ. ಸಮಾಚಾರ, ಮಂಗಳೂರು: ಕಾರೊಂದು ಮಗುಚಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ರ ನಂತೂರು-ಪಂಪ್‌ವೆಲ್ ನಡುವೆ ಜೂ.೧೬ರ ಸೋಮವಾರ ತಡರಾತ್ರಿ ನಡೆದಿದೆ.
ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಅಲ್ಲಿಯೇ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಮೊಹಮ್ಮದ್ ಅಮಲ್ (೨೯) ಮೃತಪಟ್ಟವರು.
ನಂತೂರಿನ ತಾರೆತೋಟ ಬಳಿ ಘಟನೆ ನಡೆದಿದ್ದು, ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸ್ಕಿಡ್ ಆಗಿ ಡಿವೈಡರ್‌ಗೆ ಬಡಿದು ಬಳಿಕ ಮೂರು ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ಘಟನೆ ವೇಳೆ ಹಿಂದಿನಿಂದ ಬರುತ್ತಿದ್ದ ಲೋಡ್ ತುಂಬಿದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ರಸ್ತೆಯಲ್ಲೇ ಪಲ್ಟಿಯಾಗಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಯುನೆಸ್ಕೋ ಪಟ್ಟಿಗೆ ಹಿರೇಬೆಣಕಲ್ ಸೇರಿಸಲು ಪ್ರಯತ್ನ
Next articleರಾಜ್ಯ ಸರ್ಕಾರದ ವಿರುದ್ಧ ಜೂ.೨೩ ರಂದು ಪ್ರತಿಭಟನೆ