ಮಂಜೇಶ್ವರ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತ ಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ.
ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟ ವಿದ್ಯಾರ್ಥಿ. ಇವರು ಕುಂಬಳೆಯ ಮಹಾತ್ಮ ಗಾಂಧಿ ಕಾಲೇಜಿನ ವಿದ್ಯಾರ್ಥಿ. ಪರೀಕ್ಷೆ ಮುಗಿಸಿ ಮರಳುತ್ತಿದ್ದಾಗ ಟಿಪ್ಪರ್ ಲಾರಿ ಢಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಹಸವಾರ ಗಾಯಗೊಂಡಿದ್ದಾನೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.