Home ನಮ್ಮ ಜಿಲ್ಲೆ ಅಭಿಮಾನದ ಹುರುಪಿನಲ್ಲಿ ಯುವಕರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರ್ದೈವಕರ

ಅಭಿಮಾನದ ಹುರುಪಿನಲ್ಲಿ ಯುವಕರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರ್ದೈವಕರ

0

ಬೆಂಗಳೂರು: ಅಭಿಮಾನದ ಉತ್ಸಾಹ ಮತ್ತು ಹುರುಪಿನಲ್ಲಿ ಮೂವರು ಯುವಕರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರ್ದೈವಕರ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.
ನಿನ್ನೆ ತಡರಾತ್ರಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ವಿದ್ಯುತ್ ಪ್ರವಹಿಸಿ ಮೂವರು ಯುವಕರು ದುರ್ಮರಣಕ್ಕೀಡಾದ ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಅವರು ಅಭಿಮಾನದ ಉತ್ಸಾಹ ಮತ್ತು ಹುರುಪಿನಲ್ಲಿ ಮೂವರು ಯುವಕರು ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುರ್ದೈವಕರ ಸಂಗತಿ. ಪ್ರಕರಣದಲ್ಲಿ ಇನ್ನೂ ಮೂವರು ಯುವಕರು ಗಾಯಗೊಂಡಿದ್ದು ಅವರನ್ನು ಲಕ್ಷ್ಮೇಶ್ವರದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂವರಲ್ಲೊಬ್ಬ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿದ್ದಾನೆ ಅದರೆ ಉಳಿದಿಬ್ಬರ ಸ್ಥಿತಿ ಗಂಭೀರವಾಗಿರುವುದರಿಂದ ಗದಗ ಜಿಲ್ಲಾಸ್ಪತ್ರೆಗೆ (ಜಿಮ್ಸ್) ಸ್ಥಳಾಂತರಿಸಲಾಗಿದೆ, ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ ಎಂದರು.

Exit mobile version