ಹುಬ್ಬಳ್ಳಿ: ಕೆಎಲ್ ಇ ಸಂಸ್ಥೆಯ ಬಿವಿಬಿ ಕಾಲೇಜಿನ ಅಮೃತ ಮಹೋತ್ಸವ ಹಾಗೂ ಫೋರೆನ್ಸಿಕ್ ವಿಶ್ವವಿದ್ಯಾಲಯದ ಶಂಕು ಸ್ಥಾಪನೆಗೆ ಆಗಮಿಸಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ಭೇಟಿಗೆ ಬಿಜೆಪಿ ಮುಖಂಡರ ದಂಡು ಆಗಮಿಸುತ್ತಿದೆ.
ನಗರದ ಡೆನಿಸನ್ಸ್ ಹೋಟೆಲ್ ನಲ್ಲಿ ಉಳಿದುಕೊಂಡಿರುವ ಅಮಿತ್ ಶಾ ಅವರ ಭೇಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಆರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಶಾಸಕ ಅರವಿಂದ ಬೆಲ್ಲದ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಸೇರಿದಂತೆ ವಿವಿಧ ಮುಖಂಡರು ಭೇಟಿ ನೀಡಿದ್ದಾರೆ.
ಡೆನಿಸನ್ಸ್ ಹೋಟೆಲ್ ಸುತ್ತಮುತ್ತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಹೊಟೇಲ್ ನಿಂದ ಸ್ವಲ್ಪ ಹೊತ್ತಿನಲ್ಲಿ ಬಿವಿಬಿ ಕಾಲೇಜಿನಲ್ಲಿ ನಡೆಯುವ ಬಿವಿಬಿ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಅಮಿತ್ ಶಾ ತೆರಳಲಿದ್ದಾರೆ.