ಅಮೆರಿಕ: ಡೊನಾಲ್ಡ್ ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವೆಸ್ಟ್ ಲಾನ್‌ನಲ್ಲಿರುವ ಬೃಹತ್ ತಾತ್ಕಾಲಿಕ ವೇದಿಕೆಯಲ್ಲಿ ನಡೆಯುವ ನೂತನ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಬೇಕಿದ್ದರೂ ಹೆಚ್ಚಿನ ಶೀತದ ಮುನ್ಸೂಚನೆಯಿಂದ ಒಳಾಂಗಣಕ್ಕೆ ಸ್ಥಳಾಂತರಿಸಲಾಯಿತು. 40 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಪ್ರಮಾಣವಚನ ಸ್ವೀಕಾರ ಸಮಾರಂಭ ಕ್ಯಾಪಿಟಲ್ ರೊಟುಂಡಾ ಒಳಾಂಗಣ ಸಭಾಂಗಣದಲ್ಲಿ ನಡೆದಿದೆ.
ಜೆಡಿ ವ್ಯಾನ್ಸ್ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಂದಿನ ನಾಲ್ಕು ವರ್ಷಗಳು ಅಮೆರಿಕ ಅಭಿವೃದ್ಧಿಗಾಗಿ ತಾವು ರೂಪಿಸಿರುವ ಯೋಜನೆಗಳು, ಕನಸುಗಳ ಬಗ್ಗೆ ಭಾಷಣ ಮಾಡಿದರು. ಅಮೆರಿಕವನ್ನು ಮತ್ತೆ ಗ್ರೇಟ್ ಮಾಡುವುದಾಗಿ ಶಪಥ ಮಾಡಿದರು.