ಅಯೋಧ್ಯೆಗೆ ಹೋಗಲು ಆಹ್ವಾನ ಬೇಕಿಲ್ಲ

0
7

ಮುಂಬೈ: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ ಎಂದು ಶಿವಸೇನೆ(ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಐತಿಹಾಸಿಕ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಯಾವುದೇ ಆಹ್ವಾನ ಬಂದಿಲ್ಲ. ಅಲ್ಲದೇ ಅಲ್ಲಿಗೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ. ರಾಮ ಯಾವುದೇ ಪಕ್ಷದ ಆಸ್ತಿಯಲ್ಲ, ಅವರು ಎಲ್ಲರಿಗೂ ಸೇರಿದವರು. ಹೀಗಾಗಿ ಇದನ್ನು ರಾಜಕೀಯಗೊಳಿಸಬಾರದು ಎಂದರು.

Previous articleಪ್ರತಿ ಮನೆಯಲ್ಲಿ ರಾಮಜ್ಯೋತಿ ಬೆಳಗಲಿ
Next articleರಾಮ ಮಂದಿರದ ಬಳಿ ವಾಲ್ಮೀಕಿ ಮಂದಿರ ನಿರ್ಮಿಸಿ