Home ತಾಜಾ ಸುದ್ದಿ ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ?

ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ?

0

ಹುಬ್ಬಳ್ಳಿ: ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ಸಚಿವ ರಾಮಲಿಂಗಾರೆಡ್ಡಿ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲಿಯೇ ವಿಪಕ್ಷ ನಾಯಕನ ನೇಮಕ ಆಗುತ್ತೆ. ಚೆಲುವ ನಾರಾಯಣಸ್ವಾಮಿ ಸೇರಿ ಮತ್ತೊಬ್ಬರ ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ ಎಂದರು. ಬಾಂಬೆ ಬಾಯ್ಸ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸದ್ಯದ‌ ಮಟ್ಟಿಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಮಾತಾಡಿದ್ದೇನೆ. ಆ ರೀತಿ ಯಾವುದೇ ಬೆಳವಣಿಗೆ ಆಗಿಲ್ಲಾ ಎಂದಿದ್ದಾರೆ. ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಪಕ್ಷ ಬಿಟ್ಟು ಹೋಗಲ್ಲಾ ಎಂದಿದ್ದಾರೆ. ನಾಳೆ ಏನಾಗುತ್ತೆ ಅಂತಾ ಹೇಳಲು ನಾನು ಭವಿಷ್ಯಗಾರ ಅಲ್ಲಾ. ನನಗೆ ಇರುವ ಮಾಹಿತಿ ಪ್ರಕಾರ ಯಾರೂ ಬಿಜೆಪಿ ಬಿಟ್ಟು ಹೋಗಲ್ಲಾ ಎಂದರು.
ಲೋಕಸಭಾ ಚುನಾವಣೆ:
ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೆ. ಮೋದಿಯವರ ನಾಯಕತ್ವ, ಬಿಜೆಪಿ ಪ್ರಸ್ತುತತೆ ಎಲ್ಲರಿಗೂ ಗೊತ್ತಿದೆ. ಹೀಗಾಗಿ ಯಾರೂ ಬಿಜೆಪಿ ಬಿಟ್ಟು ಹೋಗಲ್ಲಾ. ಕಾವೇರಿ ವಿಷಯ ಡೈವರ್ಟ್ ಮಾಡಲು ಪಕ್ಷಾಂತರ ವಿಚಾರ ಮುಂದೆ ತಂದಿದ್ದಾರೆ. ಭ್ರಷ್ಟಾಚಾರ ಹೆಚ್ಚಾಗಿದೆ ಅಂತಾ ಕಾಂಗ್ರೆಸ್ ಪಾರ್ಟಿಯವರೇ ಹೇಳ್ತಿದ್ದಾರೆ. ಕಾಂಗ್ರೆಸ್‌ಗೆ ನೇತ್ರತ್ವ ಮತ್ತು ನಿಯತ್ತಿಲ್ಲ. ಬಿಜೆಪಿ ಬಂಡೆಗಲ್ಲಂತೆ ಗಟ್ಟಿಯಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

Exit mobile version