ಅಶ್ಲೀಲ ಫೋಟೊ ವೈರಲ್: ದೂರು ದಾಖಲಿಸಿದ ಶಾಸಕ

0
18

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರದ್ದು ಎನ್ನಲಾದ ಅಶ್ಲೀಲ ಫೋಟೊ ವೈರಲ್ ಆದ ಬೆನ್ನಲ್ಲೇ ಅವರು ಇಂದು ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನನ್ನು ಮೂಲೆಗುಂಪು ಮಾಡುವ ಪಿತೂರಿಯ ಭಾಗವಾಗಿ ಫೋಟೊಗಳನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಮಠಂದೂರು ಹೇಳಿದ್ದಾರೆ. ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಫೋಟೊಗಳನ್ನು ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇದು ಬಿಜೆಪಿ ಒಳಜಗಳದ ಪರಿಣಾಮ ಎಂದು ಮೂಲಗಳು ತಿಳಿಸಿವೆ. ಮಠಂದೂರಿಗೆ ಟಿಕೆಟ್ ನಿರಾಕರಿಸುವಂತೆ ಪಕ್ಷದ ಮೇಲೆ ಒತ್ತಡ ಹೇರುವುದು ಈ ಕೃತ್ಯದ ಹಿಂದಿರುವ ಉದ್ದೇಶ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Previous articleನಾನು ಶಿಗ್ಗಾವಿಯಲ್ಲೇ ನಿಲ್ತೇನೆ, ಎರಡು ಕಡೆ ಸ್ಪರ್ಧೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ
Next articleಎರಡನೇ ಪಟ್ಟಿ ಬಿಡುಗಡೆ ಎಫೆಕ್ಟ್: ಬೆಳಗಾವಿ ಕಾಂಗ್ರೆಸ್‌ನಲ್ಲಿ ಬಂಡಾಯದ ಹೊಗೆ