ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ 371 ಕೋಟಿ ರೂ. ಹಗರಣ ಎಸಗಿದ ಗಂಭೀರ ಆರೋಪ ಕೇಳಿ ಬಂದಿದ್ದು. ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಎಸಗಿದ ಆರೋಪ ಇರುವ ಹಿನ್ನೆಲೆಯಲ್ಲಿ ನಂದ್ಯಾಲ್ನಲ್ಲಿ ಇಂದು ಮುಂಜಾನೆ ನಾಯ್ಡು ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
