Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಆಟೋ ನಿಗೂಢ ಸ್ಫೋಟ: ಮೈಸೂರಿನಲ್ಲಿ ಇಬ್ಬರ ವಶ

ಆಟೋ ನಿಗೂಢ ಸ್ಫೋಟ: ಮೈಸೂರಿನಲ್ಲಿ ಇಬ್ಬರ ವಶ

0

ಮಂಗಳೂರು: ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತಂಡವು ಮೈಸೂರಿನಲ್ಲಿ ಮಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದೆ. ಮೈಸೂರಿನ ಲೋಕನಾಯಕ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಮತ್ತು ಮೇಟಗಳ್ಳಿ ಠಾಣೆ ಪೊಲೀಸರು ಇಬ್ಬರು ಶಂಕಿತರ ವಶಕ್ಕೆ ಪಡೆದಿದ್ದಾರೆ.
ಆಟೋದಲ್ಲಿ ಪ್ರಯಾಣಿಕನ ರೂಪದಲ್ಲಿದ್ದ ಶಂಕಿತ ಭಯೋತ್ಪಾದಕನಿಗೆ ಮೊಬೈಲ್ ನೀಡಿದ್ದ ಎನ್ನಲಾದ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಶಂಕಿತ ಉಗ್ರನ ಸ್ನೇಹಿತನನ್ನು ವಶಕ್ಕೆ ಪಡೆದಿದೆ. 10 ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಆತ ಶಂಕಿತ ಉಗ್ರನಿಗೆ ನೀಡಿದ್ದಾನೆ ಎನ್ನಲಾಗಿದೆ. ಮಂಗಳೂರು ಪೊಲೀಸರು ತಂಡವು ಮೈಸೂರಿಗೆ ಬಂದಿದ್ದು, ಇಲ್ಲಿ ಜಂಟಿ ಕಾರ್ಯಾಚರಣೆ ಕೈಗೊಂಡು ವಿಚಾರಣೆ ನಡೆಸುತ್ತಿದೆ.

Exit mobile version