ಆಟೋ ಪಲ್ಟಿ : ಗಾಯಾಳುಗಳು ಆಸ್ಪತ್ರೆಗೆ ದಾಖಲು

0
17
ಹೊನ್ನಾಳಿ

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾದ ಘಟನೆ ಹೊನ್ನಾಳಿ ತಾಲ್ಲೂಕಿನ ನೇರಲಗುಂಡಿ ಗ್ರಾಮದ ಬಳಿ ಭಾನುವಾರ ನಡೆದಿದೆ. ಅಡಿಕೆ ಸುಲಿಯಲು ಹೋರಟ್ಟಿದ್ದ ಕಾರ್ಮಿಕರಿದ್ದ ಆಟೋ ಪಲ್ಟಿಯಾಗಿದೆ. ಅದರಲ್ಲಿದ್ದ ಕೆಲವರು ಗಾಯಗೊಂಡಿದ್ದಾರೆ. ತಕ್ಷಣ ಗಾಯಗೊಂಡವರನ್ನು ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಷಯ ತಿಳದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.

Previous articleಕ್ಷುಲಕ ಕಾರಣ: ಚಾಕುವಿನಿಂದ ಇರಿದು ಕೊಲೆ
Next articleಮಂಗಳೂರು ಸ್ಫೋಟ ಪ್ರಕರಣ: ತುಮಕೂರು, ಮೈಸೂರು, ಹುಬ್ಬಳ್ಳಿಯಲ್ಲಿ ತನಿಖೆ