Home ನಮ್ಮ ಜಿಲ್ಲೆ ಚಿಕ್ಕಮಗಳೂರು ಆಟೋ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

ಆಟೋ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಸಾವು

0

ಚಿಕ್ಕಮಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕೊಗ್ರೆಯ ಜಾಳ್ಮಾರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಆಟೋ ಚಾಲಕ ರತ್ನಾಕರ (38) ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನದಿಂದ ಜಯಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಒಂದರ ಹಿಂದೆ ಒಂದು ಅವಾಂತರ ಸೃಷ್ಟಿಯಾಗುತ್ತಿದೆ. ಇದೀಗ ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version