ಹುಬ್ಬಳ್ಳಿ: ಆನೆದಂತದಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳಗಾವಿ ಹಾಗೂ ಹೊರ ರಾಜ್ಯದ ಐವರು ಆರೋಪಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಸಿ.ಐ.ಡಿ ವಿಶೇಷ ಅರಣ್ಯ ಸಂಚಾರಿ ದಳದ ತಂಡ ಯಶಸ್ವಿಯಾಗಿದೆ.
ಕೊಲ್ಹಾಪುರ ಮೂಲದ ಸಾತ್ ಜಮಾದಾರ್ , ವಿಜಯ ಕುಂಬಾರ, ಸಾಗರ ಪುರಾಣಿಕ, ನಿಪ್ಪಾಣಿಯ ವಿನಾಯಕ ಕಾಂಬ್ಳೆ, ದಾನಾಜಿ ಪಾಟೀಲ್ ಬಂಧಿತ ಆರೋಪಿಗಳಾಗಿದ್ದಾರೆ, ಇವರಿಂದ ಆನೆ ದಂತದಿಂದ ಮಾಡಿದ್ದ 384 ಗ್ರಾಂ ತೂಕದ ಅಲಂಕಾರ ಪೆಟ್ಟಿಗೆ, 112 ಗ್ರಾಂ ತೂಕದ ಕೈಗಡುಗ, 350 ಗ್ರಾಂ ಆಯತಾಕಾರದ ಪೆಟ್ಟಿಗೆ, 279 ಗ್ರಾಂ ಮೊಟ್ಟೆ ಆಕಾರದ ಪೆಟ್ಟಿಗೆ ವಶಕ್ಕೆ ಪಡೆದಿದ್ದಾರೆ.
ಇನ್ನು ಸಿ.ಐ.ಡಿ ಅರಣ್ಯ ಸಂಚಾರದಳ ತಂಡ ಖಚಿತ ಮಾಹಿತಿ ಮೆರೆಗೆ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದ ಬಳಿ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ, ರಾಜಸ್ಥಾನದ ಒಂದು ಸಂತೆಯಲ್ಲಿ ಸಾಧು ಸಂತರ ಬಳಿ ಖರೀದಿಸಿದ್ದಾರೆಂದು ತಿಳಿದುಬಂದಿದೆ.
ಇನ್ನು ಈ ಪ್ರಕರಣವನ್ನು ಹುಬ್ಬಳ್ಳಿಯ ಸಿ.ಐ.ಡಿ ವಿಭಾಗದ ಸಬ್ ಇನ್ಸ್ಪೆಕ್ಟರ್ ಪ್ರಸಾದ್ ಪಣೇಕರ್, ಎಮ್.ಎ.ಪಾಠಕ್, ಅಶೋಕ ನಾಗರಳ್ಳಿ, ರವೀಂದ್ರ ಗೋಣೆನವರ, ಎಸ್.ಹೆಚ್.ಹುಲಗೇರ, ದಿವ್ಯ ನಾಯಕ ತಂಡ ಪತ್ತೆ ಮಾಡಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು, ಆರೋಪಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.