ಆರ್ಥಿಕ ಇಲಾಖೆ ಅನುಮತಿ ಸಿಕ್ಕಿಲ್ಲ

0
23

ಬಾಗಲಕೋಟೆ: ನಮ್ಮದೇ ಸರಕಾರ ಈ ಹಿಂದೆ ಘೋಷಿಸಿದ್ದ ೯ ಹೊಸ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆ ಸೇರಿದಂತೆ ಒಟ್ಟು ೯ ಜಿಲ್ಲೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಾವು ಘೋಷಿಸಿದ್ದ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಆರ್ಥಿಕ ಇಲಾಖೆಯಿಂದ ಅನುಮತಿ ದೊರಕಬೇಕಿದೆ ಎಂದರು.
ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂಬ ಉದ್ದೇಶ ನಮಗಿದೆ. ಆದರೆ, ಹಣಕಾಸಿನ ವ್ಯವಸ್ಥೆ ಆಗಬೇಕಾಗುತ್ತದೆ. ಸದ್ಯ ಕಾಲೇಜು ಆರಂಭಿಸುವ ಚಿಂತನೆ ಇಲ್ಲ. ಈಗಾಗಲೇ ಇರುವ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳಲ್ಲಿ ಕೆಲವು ನೂನ್ಯತೆ ಇವೆ. ಹೀಗಾಗಿ ರಾಷ್ಟ್ರೀಯ ವೈದ್ಯಕೀಯ ಮಂಡಳಿ ದಂಡ ವಿಧಿಸಿದೆ. ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

Previous articleರಾಜಕೀಯ ದುರುದ್ದೇಶದಿಂದ ಪಾದಯಾತ್ರೆ
Next articleಕುದುರೆ ಕೊಂದ ಮಾನಸಿಕ ಅಸ್ವಸ್ಥ