Home ತಾಜಾ ಸುದ್ದಿ ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ

ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ

0

ನವದೆಹಲಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದಾಗಿ ಒಡಿಶಾ ರೈಲು ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆ ವರದಿಯಲ್ಲಿ ತಿಳಿದು ಬಂದಿದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಒಡಿಶಾ ರೈಲು ದುರಂತ ಕುರಿತು ಪ್ರಾಥಮಿಕ ತನಿಖೆ ವರದಿಯಲ್ಲಿ ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆ ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತಂತೆ ಕಿರಿಯ ಅಧಿಕಾರಿಗಳು ಫೆಬ್ರವರಿ 9ರಂದು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿರಲಿಲ್ಲ. ಇದರಿಂದಾಗಿ ತೊಂದರೆ ಸಂಭವಿಸಿರುವ ಸಾಧ್ಯತೆಗಳ ಬಗ್ಗೆ ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Exit mobile version