ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

0
22

ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

Previous articleಬೆಳಗಾವಿ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬಂದಿದ್ದ ಕಾರ್ಯಕರ್ತ ಹೃದಯಾಘಾತದಿಂದ ಸಾವು
Next articleE10 ಬುಲೆಟ್ ರೈಲು: ಭಾರತ, ಜಪಾನ್‌ನಲ್ಲಿ ಏಕಕಾಲದಲ್ಲಿ ಪಾದಾರ್ಪಣೆ