ಇಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ

0
25

ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಇಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದ್ದು, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದ್ದು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿದ್ದು, ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗಲಿರುವ ಸಮಾವೇಶ ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಸಮಾವೇಶದ ಸಿದ್ದತೆ ವೇಗ ಪಡೆದಿದೆ. ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ದಪಡಿಸಿದೆ.

Previous articleಇಂದು ರಾಜ್ಯಾದ್ಯಂತ ವಿಶ್ವಗುರು ಬಸವಣ್ಣ ಭಾವಚಿತ್ರ ಅನಾವರಣ
Next articleಕಂಬಳ ಕೇವಲ ಕ್ರೀಡೆಯಲ್ಲ…