ಬೆಂಗಳೂರು: ಸಂಬಂಧವನ್ನು ಉಳಿಸಿಕೊಳ್ಳಲು ನಾವು ಸುಮ್ಮನೆ ಇದ್ದೇವೆ. ಅದಕ್ಕಾಗಿ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗುವುದಕ್ಕೆ ಆಗುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ನಡೆದ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಮಾತನಾಡಿ, ಎನ್ಡಿಎ ಸಂಬಂಧವನ್ನು ನಾನು ಉಳಿಸಿಕೊಂಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಕೊಟ್ಟಷ್ಟು ಗೌರವವನ್ನು ಯಾರಿಗೂ ಕೊಡುವುದಿಲ್ಲ. ಈ ಸಂಬಂಧವನ್ನು ಉಳಿಸಿಕೊಳ್ಳಲು ನಾವು ಸುಮ್ಮನೆ ಇದ್ದೇವೆ. ಅದಕ್ಕಾಗಿ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗುವುದಕ್ಕೆ ಆಗುವುದಿಲ್ಲ. ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ನನಗೆ ಫೋನ್ ಮಾಡಿ, ಜೆಡಿಎಸ್ನಿಂದ ಸ್ಪರ್ಧೆ ಮಾಡಲಿ ಎಂದು ತಿಳಿಸಿದ್ದಾರೆ. ಇಂತಹ ಗೌರವ ಕೊಟ್ಟಿರುವ ಬಿಜೆಪಿ ನಾಯಕರ ಜೊತೆ ಸಂಬಂಧ ಹಾಳು ಮಾಡಿಕೊಳ್ಳಲಾ, ಸಂಜೆಯವರೆಗೆ ಕಾದುನೋಡೋಣ ಎಲ್ಲ ಭಗವಂತನ ಇಚ್ಛೆ. ಯಾವುದೇ ಕಾರಣಕ್ಕೂ ಯಾರಿಗೂ ಬೆಂಡಾಗಲ್ಲ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ ಎಂದು ಕುಮಾರಸ್ವಾಮಿ ಹೇಳಿದರು.
                






















