Home ತಾಜಾ ಸುದ್ದಿ “ಇನ್ವೆಸ್ಟ್ ಕರ್ನಾಟಕ-2025” : 6ಲಕ್ಷ ಜನರಿಗೆ ಉದ್ಯೋಗವಕಾಶ ಸೃಷ್ಟಿ

“ಇನ್ವೆಸ್ಟ್ ಕರ್ನಾಟಕ-2025” : 6ಲಕ್ಷ ಜನರಿಗೆ ಉದ್ಯೋಗವಕಾಶ ಸೃಷ್ಟಿ

0

10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ ಒಪ್ಪಂದ: ಶೇ.45ರಷ್ಟು ಉತ್ತರ ಕರ್ನಾಟಕದಲ್ಲಿ ಹೂಡಿಕೆ

ವಿಜಯಪುರ: “ಇನ್ವೆಸ್ಟ್ ಕರ್ನಾಟಕ-2025” ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.
ಪ್ರಗತಿಯ ಮರು ಪರಿಕಲ್ಪನೆ ತತ್ವದಡಿ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಂತರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಸಮಾವೇಶದಲ್ಲಿ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಆರು ಲಕ್ಷ ಜನರಿಗೆ ಉದ್ಯೋಗವಕಾಶ ಸೃಷ್ಟಿಯಾಗಿದೆ. ಅದರಲ್ಲಿ ಶೇ.75ರಷ್ಟು ಬೆಂಗಳೂರು ಹೊರತು ಪಡಿಸಿ ಮತ್ತು ಅದರಲ್ಲಿ ಶೇ.45ರಷ್ಟು ಉತ್ತರ ಕರ್ನಾಟಕದಲ್ಲಿ ಹೂಡಿಕೆಯಾಗಲಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಪಾಲಿಗೆ ಇದೊಂದು ಆಶಾದಾಯಕ ಬೆಳವಣಿಗೆ, ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಬಂಡವಾಳ ಹೂಡಲು ಅನೇಕ ಉದ್ದಿಮೆದಾರರು ಮುಂದೆ ಬಂದಿದ್ದಾರೆ. ಪ್ರಪ್ರಥಮ ಬಾರಿಗೆ ಪ್ರಪಂಚದ 60ಕ್ಕೂ ಅಧಿಕ ಪರಿಣಿತರು, ಉದ್ದಿಮೆದಾರರು ಭಾಗವಹಿಸಿದ್ದರು ಎಂದರು.

Exit mobile version