Home ನಮ್ಮ ಜಿಲ್ಲೆ ಇಮಲಾಪುರ್ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣ: 42ಕ್ಕೂ ಹೆಚ್ಚು ಪ್ರಕರಣ ದಾಖಲು

ಇಮಲಾಪುರ್ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣ: 42ಕ್ಕೂ ಹೆಚ್ಚು ಪ್ರಕರಣ ದಾಖಲು

0

ಯಾದಗಿರಿ: ಜಿಲ್ಲೆಯ ಗುರುಮಠಕಲ್‌ ತಾಲ್ಲೂಕಿನ ಇಮ್ಲಾಪುರ ಗ್ರಾಮದಲ್ಲಿ ವಾಂತಿ-ಭೇದಿ ಉಲ್ಬಣಗೊಂಡಿದ್ದು 42ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಶಾಲಾ ಕಟ್ಟಡದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಯಾವುದೇ ಗಂಭೀರತೆ ಇಲ್ಲಾ ಎಂದು ಡಿಹೆಚ್ಓ ಅವರು ತಿಳಿಸಿದ್ದಾರೆ.
ಸೋಮವಾರ ಸಂಜೆ ವೇಳೆ ನಾಲ್ಕು ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ರಾತ್ರಿ ವೇಳೆಗೆ ತೀವ್ರಗೊಂಡಿದೆ. ಮಂಗಳವಾರ ಮಧ್ಯಾಹ್ನದ ವೇಳೆಗೆ 42ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿತು. ಗ್ರಾಮದ ತಾತ್ಕಾಲಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಕೆಲವರು ಬೇರೆ ಬೇರೆ ಆಸ್ಪತ್ರೆಗಳಿಗೆ ತೆರಳಿದ್ದಾರೆ.
ಗ್ರಾಮಕ್ಕೆ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಹಾಗೂ ಜಿಪಂ ಉಪ ಕಾರ್ಯದರ್ಶಿ ಅಮರೇಶ್ ನಾಯಕ್ ಭೇಟಿ ನೀಡಿದರು. ನೀರು ಸರಬರಾಜು ಪೈಪ್‌ಗಳು ಹಾಗೂ ಟ್ಯಾಂಕ್‌ಗಳನ್ನು ಪರಿಶೀಲನೆ ಮಾಡಿದರು. ನೀರಿನ ಮಾದರಿ ಪರೀಕ್ಷೆಗೆ ಕಳುಹಿಸಲು ಸೂಚಿಸಿದರು. ಗ್ರಾಮದಲ್ಲಿ ಟಿಎಚ್‌ಒ ಡಾ. ಹಣಮಂತರೆಡ್ಡಿ ಸೇರಿದಂತೆ ವೈದ್ಯರ ತಂಡ ಠಿಕಾಣಿ ಹೂಡಿದೆ.

Exit mobile version