Home ನಮ್ಮ ಜಿಲ್ಲೆ ಕಲಬುರಗಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

0

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಬೀರನಳ್ಳಿ ಗ್ರಾಮ ಗ್ರಾಮದ ಕಾಗಿಣಾ ನದಿಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಸಾವನ್ನಪ್ಪಿದ ವಿದ್ಯಾರ್ಥಿಗಳನ್ನು ಕಾಶಿನಾಥ್ (16) ಮತ್ತು ಭೀಮಾಶಂಕರ (15) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಕಾಗಿಣಾ ನದಿಗೆ ಮೂವರು ವಿದ್ಯಾರ್ಥಿಗಳು ಈಜಾಡಲು ತೆರಳಿದ್ದರು. ಈಜು ಬಾರದ ಹಿನ್ನಲೆಯಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿ ನೀರಿಗೆ ಇಳಿದಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Exit mobile version