Home ತಾಜಾ ಸುದ್ದಿ ಈದ್ಗಾ ಮೈದಾನಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಅಂಜುಮನ್ ಮೇಲ್ಮನವಿ ತಿರಸ್ಕಾರ

ಈದ್ಗಾ ಮೈದಾನಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಅಂಜುಮನ್ ಮೇಲ್ಮನವಿ ತಿರಸ್ಕಾರ

0

ಧಾರವಾಡ : ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿ ಕಿತ್ತೂರು ಚೆನ್ನಮ್ಮ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ಪಾಲಿಕೆ ಕೈಗೊಂಡ ಠರಾವು ವಿರೋಧಿಸಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದೆ.
ನ್ಯಾ.ಮೂ. ಸಚಿನ್ ಮಗದುಮ್ಮ‌ ಅವರಿದ್ದ ಏಕಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಎರಡನೇ ವರ್ಷವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ಸಿದ್ಧತೆ ಭರದಿಂದ ಸಾಗಿದೆ. ಗಣೇಶೋತ್ಸವ ಕುರಿತು ಮಹಾನಗರ ಪಾಲಿಕೆ ಕೈಗೊಂಡ ನಿರ್ಣಯವನ್ನು ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯವರು ಪ್ರಶ್ನಿಸಿ ಧಾರವಾಡ ಹೈಕೋರ್ಟನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಈ ಮೇಲ್ಮನವಿಯನ್ನು ತಿರಸ್ಕರಿಸಿದೆ.

https://samyuktakarnataka.in/%e0%b2%b9%e0%b3%81-%e0%b2%a7%e0%b2%be-%e0%b2%aa%e0%b3%8a%e0%b2%b2%e0%b3%80%e0%b2%b8%e0%b3%8d-%e0%b2%87%e0%b2%b2%e0%b2%be%e0%b2%96%e0%b3%86%e0%b2%af%e0%b2%bf%e0%b2%82%e0%b2%a6-%e0%b2%97/

Exit mobile version