Home News ಈಶ್ವರಪ್ಪನವರಿಗೆ ಕರೆ ಮಾಡಿ ತಪ್ಪು ಮಾಡಿದ ಪ್ರಧಾನಿ

ಈಶ್ವರಪ್ಪನವರಿಗೆ ಕರೆ ಮಾಡಿ ತಪ್ಪು ಮಾಡಿದ ಪ್ರಧಾನಿ

ಭಾರತೀಯ ಪ್ರಜಾಪ್ರಭುತ್ವಕ್ಕೆ ಇಂದು ಅತ್ಯಂತ ಕರಾಳ ದಿನ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ಅವರಿಗೆ ಕರೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ಅಪರಾಧ ಕೃತ್ಯವನ್ನು ಎಸಗಿದ್ದಾರೆ ಎಂದರು.
ರಾಜಕೀಯ ಲಾಭ ಹಾಗೂ ಮತ ಗಳಿಕೆಗೆ ಮೋದಿ ಹಾಗೂ ಬಿಜೆಪಿ ಯಾವುದೇ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಮೋದಿ ಅವರು ಈಶ್ವರಪ್ಪ ಅವರಿಗೆ ಕರೆ ಮಾಡಿ ಪ್ರಶಂಸೆ ಮಾಡುವ ಮೂಲಕ ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರಕ್ಕೆ ಅನುಮೋದನೆ ನೀಡಿದ್ದಾರೆ. ಈಶ್ವರಪ್ಪನಿಗೆ 40 ಪರ್ಸೆಂಟ್ ಕಮಿಷನ್ ನೀಡಲಾಗದೇ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಈಶ್ವರಪ್ಪನವರಿಗೆ ಫೋನ್‌ ಮಾಡಿದ ಪ್ರಧಾನಿ ಅವರ ಈ ನಡೆ ನೋಡಿ ದೇಶದ ಪ್ರಜೆಯಾಗಿ ನನಗೆ ನಾಚಿಕೆಯಾಗುತ್ತಿದೆ ಎಂದರು.

Exit mobile version