Home ತಾಜಾ ಸುದ್ದಿ ಉರಿಗೌಡ, ನಂಜೇಗೌಡ ಹೆಸರಲ್ಲಿ ಆಧಾರ್ ಕಾರ್ಡ್

ಉರಿಗೌಡ, ನಂಜೇಗೌಡ ಹೆಸರಲ್ಲಿ ಆಧಾರ್ ಕಾರ್ಡ್

0

ಬೆಂಗಳೂರು: ಟಿಪ್ಪು ಕೊಂದವರು ಉರಿಗೌಡ, ದೊಡ್ಡ ನಂಜೇಗೌಡ ಎಂದು ಬಿಜೆಪಿ ನಾಯಕರು ಹೆಸರನ್ನು ಪ್ರಸ್ತಾಪಿಸಿದ್ದಾರೆ. ಸದ್ಯ ಈ ಕುರಿತಂತೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಇದರ ಬೆನ್ನಲ್ಲೇ ಉರಿಗೌಡ, ದೊಡ್ಡ ನಂಜೇಗೌಡ ಹೆಸರಲ್ಲಿ ಆಧಾರ ಕಾರ್ಡ್‌ವೊಂದು ಭಾರಿ ಸದ್ದು ಮಾಡುತ್ತಿದೆ.
ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮೋರು ಎನ್ನುವ ತಂಡ ಈ ಆಧಾರ್ ಕಾರ್ಡ್ ಬಿಡುಗಡೆ ಮಾಡಿದೆ. ಉರಿಗೌಡ ಮತ್ತು ನಂಜೇಗೌಡ ಹೆಸರಿನ ಆಧಾರ್ ಕಾರ್ಡ್ ಬಿಡುಗಡೆ ಮಾಡಿದ್ದು, ಇವರಿಬ್ಬರ ತಂದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ತಾಯಿಯನ್ನಾಗಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಎಂದು ವ್ಯಂಗ್ಯ ಮಾಡಲಾಗಿದೆ.

Exit mobile version