ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20ರಿಂದ 22ರವರೆಗೆ ಮಂಡ್ಯ ನಗರದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬಳಿಯ ಅಮರಾವತಿ ಹೋಟೆಲ್ ಹಾಗೂ ಸ್ಯಾಂಟೋ ಆಸ್ಪತ್ರೆ ಹಿಂಭಾಗದ ಸ್ಥಳದಲ್ಲಿ ನಡೆಯಲಿದೆ. ಸಮ್ಮೇಳನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರುಗಳು, ನ್ಯಾಯಾಧೀಶರು ಹಾಗೂ ಗಣ ವ್ಯಕ್ತಿಗಳು ಆಗಮಿಸಲಿದ್ದು ಗಣ್ಯ ವ್ಯಕ್ತಿಗಳಿಗೆ ಮತ್ತು ನೋಂದಾಯಿತ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಾಸ್ತವ್ಯಕ್ಕೆ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯ ಸಮಸ್ತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳವನ್ನು ಯಶಸ್ವಿಗೊಳಿಸಬೇಕಾಗಿರುತ್ತದೆ. ಆದ್ದರಿಂದ ಡಿಸೆಂಬರ್ 20 ಮತ್ತು 21ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿದೆ.
ಈ ರಜೆ ಅವಧಿಯನ್ನು ಸರ್ಕಾರಿ ರಜಾ ದಿನದಂದು ಸರಿದೂಗಿಸಿ ಪಾಠ-ಪ್ರವಚನ ನಡೆಸಬೇಕೆಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕುಮಾರ ಅವರು ಆದೇಶ ಹೊರಡಿಸಿದ್ದಾರೆ.