ಎಳನೀರು ಸೇವನೆಯಿಂದ 137 ಮಂದಿ ಅಸ್ವಸ್ಥ ಪ್ರಕರಣ: ಬೊಂಡ ಫ್ಯಾಕ್ಟರಿ ಸೀಲ್ ಡೌನ್

0
27

ಮಂಗಳೂರು: ನಗರ ಹೊರವಲಯದ ಅಡ್ಯಾರ್‌ನಲ್ಲಿರುವ ‘ಬೊಂಡ ಫ್ಯಾಕ್ಟರಿ’ ಬಂದ್ ಮಾಡುವಂತೆ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಆದೇಶಿಸಿದೆ.
ಗರ ಹೊರವಲಯದ ಅಡ್ಯಾರ್‌ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ. ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ. ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವ ಪೈಕಿ ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಮಂಗಳೂರು, ಬಂಟ್ವಾಳದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

Previous articleಟೆರೇಸ್ ಮೇಲೆ ಗಾಂಜಾ ಕೃಷಿ: ಬ್ರಿಟಿಷ್ ಪ್ರಜೆ ಬಂಧನ
Next articleಖಜಾನೆ ಖಾಲಿ ಮಾಡಿರುವ ರಾಜ್ಯದ ದರಿದ್ರ ಕಾಂಗ್ರೆಸ್‌ ಸರ್ಕಾರ