ಬೆಂಗಳೂರು: ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ ೧೦ಕ್ಕೆ ಪ್ರಕಟವಾಗುವ ಸಾಧ್ಯತೆಗಳಿವೆ. ರಾಜ್ಯದ ೧,೧೨೪ ಕೇಂದ್ರಗಳಲ್ಲಿ ಮಾರ್ಚ್ ೧ರಿಂದ ೨೨ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ ೬.೯೮ ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. ೯೮ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಏ.೧೦ ಕ್ಕೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.