Home Advertisement
Home ತಾಜಾ ಸುದ್ದಿ ಐಪಿಎಸ್‌ ಅಧಿಕಾರಿ ವಿಕಾಸಕುಮಾರಗೆ ಬಿಗ್‌ ರಿಲೀಫ್‌

ಐಪಿಎಸ್‌ ಅಧಿಕಾರಿ ವಿಕಾಸಕುಮಾರಗೆ ಬಿಗ್‌ ರಿಲೀಫ್‌

0
123

ಬೆಂಗಳೂರು: ಐಪಿಎಸ್‌ ಅಧಿಕಾರಿ ವಿಕಾಸಕುಮಾರಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಸರ್ಕಾರಕ್ಕೆ ಮುಖಭಂಗ ಆಗಿದೆ.
ಜೂನ್‌ 4ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಆರ್‌ಸಿಬಿ ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ ವಿಕಾಸಕುಮಾರ್‌ ಅವರ ಅಮಾನತು ರದ್ದುಗೊಳಿಸುವಂತೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶಿಸಿದೆ.
ತಮ್ಮ ಅಮಾನತು ಆದೇಶವನ್ನು ಪ್ರಶ್ನಿಸಿ ವಿಕಾಸ್ ಕುಮಾರ್ ಅವರು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮೊರೆ ಹೋಗಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಕೆ. ಶ್ರೀವಾತ್ಸವ, ಸಂತೋಷ್ ಮೆಹ್ರಾ ನೇತೃತ್ವದ ಪೀಠವು ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಆದೇಶ ಹೊರಡಿಸಿದೆ.
ಸಿಎಟಿ ಆದೇಶದಿಂದ ಇನ್ನಿಬ್ಬರು ಅಧಿಕಾರಿಗಳ ಅಮಾನತನ್ನು ಗಮನಿಸುವಂತೆ ಸರ್ಕಾರಕ್ಕೆ ಸಿಎಟಿ ಆದೇಶಿಸಿದೆ. ಇನ್ನಿಬ್ಬರ ಅಮಾನತು ಅನ್ನು ವಾಪಸ್‌ ಪಡೆಯಬಹುದು ಎಂದು ಸಲಹೆ ನೀಡಿದೆ.

Previous articleವಿದ್ಯುತ್ ಶಾರ್ಟ್ ಸರ್ಕ್ಯೂಟ್ : ಇಬ್ಬರು ಸಾವು
Next articleಊಹಾ ಪತ್ರಿಕೋದ್ಯಮ ಸಮಾಜಕ್ಕೂ ಅಪಾಯ