ಐರಾವತ ಬಸ್‌ಗೆ ಬೆಂಕಿ: ಪ್ರಯಾಣಿಕರು ಪಾರು

0
17

ಚಿಕ್ಕಮಗಳೂರು: ಚಲಿಸುತ್ತಿದ್ದ ಐರಾವತ ಸ್ಲೀಪರ್ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದೆ.
ಬೆಂಕಿಯಿಂದ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ 40ಜನ‌ ಪ್ರಯಾಣಿಸುತ್ತಿದ್ದರು.‌ ತರೀಕೆರೆ ತಾಲೂಕು‌ ಅಜ್ಜಂಪುರ ಕ್ರಾಸ್ ಬಳಿ ಮಧ್ಯರಾತ್ರಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ‌ ಬಸ್ ನಿಲ್ಲಿಸಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಮತ್ತು ನಿರ್ವಹಕ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ‌ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದೆ. ಬೆಂಕಿಯಿಂದ ಬಸ್ ಸಂಪೂರ್ಣ ಸುಟ್ಟು ಹೋಗಿದೆ.

Previous articleರೇವಣ್ಣಗೆ ಜಾಮೀನು: ಸಂಭ್ರಮಿಸುವ ಸಮಯ ಇದಲ್ಲ: HDK
Next articleಜೈಲಿಂದ ಬಿಡುಗಡೆಯಾದ ರೇವಣ್ಣ