Home ಕ್ರೀಡೆ ಐಸಿಸಿ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ

ಐಸಿಸಿ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ

0

ಮುಂಬೈ: ಇದೇ ಅಕ್ಟೋಬರ್ ೫ರಿಂದ ಭಾರತದ ಸಂಪೂರ್ಣ ಆತಿಥ್ಯದಲ್ಲಿ ಐಸಿಸಿ ವಿಶ್ವಕಪ್ ನಡೆಯಲಿದ್ದು, ನಿರೀಕ್ಷೆಯಂತೆ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತನ್ನ ೧೫ ಮಂದಿ ಸಂಭಾವ್ಯ ಆಟಗಾರರ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ. ರೋಹಿತ್ ಶರ್ಮಾ ನಾಯಕನಾಗಿದ್ದರೆ, ಹಾರ್ದಿಕ್ ಪಾಂಡ್ಯಾ ಉಪನಾಯಕ ಆಗಿ ಆಯ್ಕೆಯಾಗಿದ್ದಾರೆ. ವಿಕೇಟ್ ಕೀಪರ್ ಆಗಿ ಕೆ.ಎಲ್. ರಾಹುಲ್ ಆಯ್ಕೆಯಾಗಿದ್ದಾರೆ.
ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಪ್ರಕಟಿಸಿರುವ ತಂಡ ಇಂತಿದೆ
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್.

Exit mobile version