Home ನಮ್ಮ ಜಿಲ್ಲೆ ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು!

ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು!

0

ಶ್ರೀರಂಗಪಟ್ಟಣ: ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾವಿಗೀಡಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶಾ ಸಾವನ್ನಪ್ಪಿರುವ ಮಕ್ಕಳು. ನಿನ್ನೆ ಮಧ್ಯಾಹ್ನ ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಖರೀದಿಸಿ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ಐಸ್ ಕ್ರೀಂ ತಿಂದ ಕೆಲವೇ ಸಮಯದಲ್ಲಿ ಮಕ್ಕಳು ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತರಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ಗ್ರಾಮದ ಬೇರೆ ಮಕ್ಕಳು ಕೂಡ ಆತನಿಂದಲೇ ಐಸ್‌ಕ್ರೀಂ ಖರೀದಿಸಿ ‌ತಿಂದಿದ್ದರು. ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version