ಒಳ ಮೀಸಲಾತಿ: ಮೂರು ಹಂತಗಳಲ್ಲಿ ಸಮೀಕ್ಷೆ

0
71

ಬೆಂಗಳೂರು: ರಾಜ್ಯ/ ಜಿಲ್ಲಾ / ತಾಲೂಕು ಮಟ್ಟದ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ಸಮೀಕ್ಷೆ ಕೈಗೊಳ್ಳುವ ಸಂಬಂಧ ಈಗಾಗಲೇ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, ಇವುಗಳ ಮೇಲುಸ್ತುವಾರಿಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷೆಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಮೊದಲನೇ ಹಂತದಲ್ಲಿ ಇಂದಿನಿಂದ 2025ರ ಮೇ 17ರ ವರೆಗೆ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ 2025ರ ಮೇ 19 ರಿಂದ 2025ರ ಮೇ 21ರ ವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಮೂರನೇ ಹಂತದಲ್ಲಿ 2025ರ ಮೇ 19 ರಿಂದ 2025ರ ಮೇ 23ರ ವರೆಗೆ ಆನ್‌ಲೈನ್‌ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಸಮೀಕ್ಷೆಗೆ ನೇಮಕವಾಗಿರುವ ಸುಮಾರು 65,000 ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಸಮೀಕ್ಷೆಯ ಕುರಿತು ಈಗಾಗಲೇ ತಾಲೂಕು ಮಟ್ಟದಲ್ಲಿ ತರಬೇತಿಯನ್ನು ನೀಡಲಾಗಿರುತ್ತದೆ ಎಂದಿದ್ದಾರೆ.

ಸಹಾಯವಾಣಿಗಳು: “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ – ಕಂಟ್ರೋಲ್‌ ರೂಂ – 9482300400 ಹಾಗೂ ಜಸ್ಟಿಸ್‌ ನಾಗಮೋಹನ ದಾಸ್‌ ಆಯೋಗ (ಒಳ ಮೀಸಲಾತಿ ಕುರಿತು) – 9481359000 ಕ್ಕೆ ಸಂಪರ್ಕಿಸಬಹುದಾಗಿದೆ. ಈ ಸಹಾಯವಾಣಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24 ಗಂಟೆಯೂ ಲಭ್ಯವಿರಲಿದೆ.

ಚಿತ್ರ
Previous articleಇದ್ದಕ್ಕಿದ್ದಂತೆ ಕುಸಿದು ಬಿದ್ದ ನಾಡಕಚೇರಿ
Next articleನಾನು ಸಾಹಿತಿ ಅಲ್ಲ. ಆದರೆ, ಸಾಹಿತ್ಯ ಮತ್ತು ಸಾಹಿತಿಗಳ ಒಡನಾಟ ನನಗಿದೆ