ಕಡಿಮೆ ಅಂಕ ತಂದ ಆತಂಕ: ವಿದ್ಯಾರ್ಥಿನಿ ಆತ್ಮಹತ್ಯೆ

0
100
ಉಡುಪಿ ವಿದ್ಯಾರ್ಥಿನಿ

ಉಡುಪಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬಗ್ಗೆ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರ್ಡೂರು ಎಂಬಲ್ಲಿ ನಡೆದಿದೆ. ಉನ್ನತ ಶ್ರೇಣಿಯಲ್ಲಿ ಪಾಸಾಗಿ ಉಚಿತ ಸೀಟ್ ಪಡೆದಿದ್ದ ವಿದ್ಯಾರ್ಥಿನಿಗೆ ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂತು ಎಂದು ಪ್ರಿನ್ಸಿಪಾಲ್ ಬೈದಿದ್ದಾರೆ ಎನ್ನಲಾಗುತ್ತಿದೆ. ಈ ಮಾತಿನಿಂದ ಬೇಸರಗೊಂಡ ವಿದ್ಯಾರ್ಥಿನಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಹೆಬ್ರಿಯ ಎಸ್‌ಆರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಪೆರ್ಡೂರು ನಿವಾಸಿ ತೃಪ್ತಿ (17) ಎಂದು ಗುರುತಿಸಲಾಗಿದೆ. ಉತ್ತಮವಾಗಿ ಓದುತ್ತಿದ್ದ ತೃಪ್ತಿ, ಇತ್ತೀಚಿಗೆ ನಡೆದ ಪರೀಕ್ಷೆಯಲ್ಲಿ ಸ್ವಲ್ಪ ಕಡಿಮೆ ಅಂಕ ಬಂದಿರುವ ಬಗ್ಗೆ ನೊಂದಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದ ಅವರು ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಘಟನೆ ಸಂಬಂಧ ದೀಪ್ತಿ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಮುಂದೆ ನನ್ನ ಮಗಳನ್ನು ನಿಂದಿಸಿದ್ದಾರೆ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿದ್ದಾಳೆಂದು ತಂದೆ ಸುರೇಶ್ ಮೆಂಡನ್ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Previous articleಜಯಶಂಕರ್‌ ನಿರ್ದೇಶನದ ‘ಶಿವಮ್ಮ’ ಚಿತ್ರಕ್ಕೆ ಯುರೋಪಿನ ಪ್ರತಿಷ್ಠಿತ ಪ್ರಶಸ್ತಿ
Next articleಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆ