Home ನಮ್ಮ ಜಿಲ್ಲೆ ಕಣ್ಣನ್ ಅವರ ತಪ್ಪಿಲ್ಲ

ಕಣ್ಣನ್ ಅವರ ತಪ್ಪಿಲ್ಲ

0

ಬೆಂಗಳೂರು: ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದಿದ್ದಾರೆ.

https://samyuktakarnataka.in/%e0%b2%b9%e0%b2%bf%e0%b2%b0%e0%b3%87%e0%b2%ae%e0%b2%97%e0%b2%b3%e0%b3%82%e0%b2%b0%e0%b3%81-%e0%b2%95%e0%b2%a3%e0%b3%8d%e0%b2%a3%e0%b2%a8%e0%b3%8d%e0%b2%97%e0%b3%86-%e0%b2%9c%e0%b2%bf%e0%b2%b2/

Exit mobile version