Home ತಾಜಾ ಸುದ್ದಿ ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿ

ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿ

0

ಬೆಂಗಳೂರು: ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ, ಇಂದು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಅವರು “ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು ಆ‌ ಮಾತಿಗೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ್, ಉತ್ತರ ಪ್ರದೇಶದಲ್ಲಿ ಏಕೆ ಎನ್ಇಪಿ ಜಾರಿ ಮಾಡಿಲ್ಲ? ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ. ಅದರಿಂದಾಗಿಯೇ ಇಂದು ಬೆಂಗಳೂರು ಐಟಿ ರಾಜಧಾನಿಯಾಗಿರುವುದು. ರಾಜ್ಯದಲ್ಲಿನ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆ ಸ್ಥಾನದಲ್ಲಿದ್ದಾರೆ, ಅದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆಯೇ ಕಾರಣ ಎಂದಿದ್ದಾರೆ.

Exit mobile version