ಕರ್ನಾಟಕದ ಮಹಾನ್ ವ್ಯಕ್ತಿಗಳು ಅಭಿವೃದ್ಧಿಗೆ ಶಕ್ತಿ ತುಂಬುತ್ತಿದ್ದಾರೆ

0
32

ನವದೆಹಲಿ: ಕರ್ನಾಟಕದ ಮಹಾನ್ ವ್ಯಕ್ತಿಗಳು ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕರ್ನಾಟಕ ರಾಜ್ಯೋತ್ಸವಕ್ಕೆ ಅವರು ಸಾಮಾಜಿಕ ಜಾಲತಾಣದಲ್ಲಿ ಕನ್ನಡದಲ್ಲಿ ಶುಭ ಹಾರೈಸಿ ಪೋಸ್ಟ್‌ ಮಾಡಿದ್ದಾರೆ, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದಿದ್ದಾರೆ.

Previous articleಜಲ ವಿದ್ಯುತ್‌ ಉತ್ಪಾದನೆ ಕರ್ನಾಟಕವೇ ಮೊದಲು
Next articleವಕ್ಫ್ ಆಸ್ತಿ : ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ್