ಕರ್ನಾಟಕ ಸಂಭ್ರಮ-50 ಲಾಂಛನ ಬಿಡುಗಡೆ

0
16

ಬೆಂಗಳೂರು: ರಾಜ್ಯವನ್ನು ಮರುನಾಮಕರಣ ಮಾಡಿ 50 ನೇ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ನಡೆಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ಆಯೋಜಿಸಲಾಗಿದ್ದ “ಕರ್ನಾಟಕ ಸಂಭ್ರಮ – 50” ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಚಿವರಾದ ಹೆಚ್.ಕೆ.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Previous articleನಿಮ್ಮ ಶುಭ ಹಾರೈಕೆಯಿಂದ, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ
Next articleಶ್ವೇತ ಬಣ್ಣದಲ್ಲಿ ನವರಾತ್ರಿ ನವೋಲ್ಲಾಸ