ಬೆಂಗಳೂರು: ರಾಜ್ಯ ಸರ್ಕಾರ ಒಟ್ಟು 2,000 ಹೊಸ ಬಸ್‌ಗಳ ಖರೀದಿಗೆ ನಿರ್ಧರಿಸಲಾಗಿದೆ ಎಂದು ಸಾರಿಗೆ ಇಲಾಖೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ 2000 ಹೊಸ ಬಸ್‌ಗಳ ಖರೀದಿ, ಕರ್ನಾಟಕ ಸಾರಿಗೆ ವ್ಯವಸ್ಥೆಗೆ ಶಕ್ತಿ ಸಂಚಾರ! ಎಂದಿದ್ದಾರೆ. ಸಾರಿಗೆ ಸಂಸ್ಥೆಗಳ ಹಿತ ಕಾಯುವ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿದೆ. ಇದೀಗ ಅದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.