Home ತಾಜಾ ಸುದ್ದಿ ಕಲಘಟಗಿ ಮಾಜಿ ಬಿಜೆಪಿ ಶಾಸಕ ಸಿ.ಎಂ.ನಿಂಬಣ್ಣವರ ನಿಧನ

ಕಲಘಟಗಿ ಮಾಜಿ ಬಿಜೆಪಿ ಶಾಸಕ ಸಿ.ಎಂ.ನಿಂಬಣ್ಣವರ ನಿಧನ

0

ಬೆಂಗಳೂರು: ಧಾರವಾಡ ಜಿಲ್ಲೆ ಕಲಘಟಗಿಯ ಕ್ಷೇತ್ರದ ಮಾಜಿ ಶಾಸಕ ಬಿಜೆಪಿಯ ಸಿ.ಎಂ.ನಿಂಬಣ್ಣವರ (76) ಭಾನುವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಲಘಟಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂತೋಷ ಲಾಡ್ ವಿರುದ್ಧ ಗೆಲುವು ಸಾಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.
ಮೃತರ ಅಂತ್ಯಕ್ರಿಯೆ ಕಲಘಟಗಿಯಲ್ಲಿ ಸೋಮವಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Exit mobile version