Home ತಾಜಾ ಸುದ್ದಿ ಕಲುಷಿತ ನೀರು ಪ್ರಕರಣ: ಅಗತ್ಯ ವ್ಯವಸ್ಥೆಗೆ ಸೂಚಿಸಿದ ಸಿಎಂ

ಕಲುಷಿತ ನೀರು ಪ್ರಕರಣ: ಅಗತ್ಯ ವ್ಯವಸ್ಥೆಗೆ ಸೂಚಿಸಿದ ಸಿಎಂ

0

ಬೆಂಗಳೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಬೇಕು ಹಾಗೂ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ ಎಂದಿದ್ದಾರೆ.

Exit mobile version