ಚಿತ್ರದುರ್ಗ: ಕಲುಷಿತ ನೀರು ಕುಡಿದು 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆಕಕ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರದಲ್ಲಿ ನಡೆದಿದೆ. JJM ಪೈಪ್ ಲೈನ್ ದುರಸ್ತಿ ಮಾಡುವ ವೇಳೆ ಕುಡಿಯುವ ನೀರಿನ ಪೈಪ್‌ಗೆ ಹಾನಿಯಾಗಿದ್ದು ಆ ಪೈಪ್ ಮೂಲಕ ಚರಂಡಿ ನೀರು ಸರಬರಾಜು ಆಗಿರಬಹುದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ನಡೆದಿರುವ ದುರಂತವಾಗಿದೆ ಎಂದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಜನರಿಗೆ ರಾಂಪುರ, ಮೊಳಕಾಲ್ಮೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆ ಆರೋಗ್ಯ ಇಲಾಖೆ ಸಿಬ್ಬಂಧಿ, ವೈಧ್ಯರು ಗ್ರಾಮಕ್ಕೆ ದೌಡಾಯಿಸಿದ್ದು, ಜನರ ಆರೋಗ್ಯ ತಪಾಸಣೆ ನಡೆಸಿ, ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಪ್ರಾರಂಭಿಸಿದ್ದಾರೆ. ಸ್ಥಳಕ್ಕೆ THO ಡಾ.ಮಧುಕುಮಾರ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೇರೆ ಮೂಲಗಳಿಂದ ನೀರಿನ ವ್ಯವಸ್ಥೆ ಮಾಡಿಸಿದ್ದಾರೆ.
