ಕಲ್ಯಾಣಗಳಿಗಾಗಿ ಮೀಸಲಾಗಿದ್ದ ಹಣ ದುರುಪಯೋಗ

0
19

ಬೆಂಗಳೂರು: ಬಾಕಿಯಿರುವ ಅನುದಾನ ಬಿಡುಗಡೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಗಳಿಗಾಗಿ ಮೀಸಲಾಗಿದ್ದ ಹಣವನ್ನು ದುರುಪಯೋಗಿಸಿಕೊಂಡು ಪರಿಶಿಷ್ಟರನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ ನಿಧಿಯ ಶೇ 41 ರಷ್ಟು ಬಿಡುಗಡೆ ಬಾಕಿ ಉಳಿದಿರುವುದು ಶೋಷಿತ ಸಮುದಾಯಗಳ ಮೇಲೆ ಈ ಸರ್ಕಾರಕ್ಕಿರುವ ತಾತ್ಸಾರ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ.

ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ರಾಜ್ಯದ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದೇ ಒಂದು ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸುವ ಬದ್ಧತೆಯಿಲ್ಲದ, ತಳ ಸಮುದಾಯಗಳ ಸ್ವಾವಲಂಬಿ ಬದುಕು ಕಟ್ಟಿಕೊಡುವ ನಿಗಮ ಮಂಡಳಿಗಳಿಗೆ ಅನುದಾನಗಳನ್ನೂ ನೀಡದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಶೋಷಿತ ಸಮುದಾಯಗಳು ಆಕ್ರೋಶಿತರಾಗಿದ್ದಾರೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಪರಿಶಿಷ್ಟ ಸಮುದಾಯಗಳ ಶ್ರೇಯೋಭಿವೃದ್ಧಿಗೆ ಬಾಕಿಯಿರುವ ಅನುದಾನ ಬಿಡುಗಡೆ ಮಾಡಲಿ ಎಂದು ಒತ್ತಾಯಿಸುವೆ ಎಂದಿದ್ದಾರೆ.

Previous articleಮೂರು ಗಂಟೆಗಳ ವಿಚಾರಣೆ: ಮಧ್ಯಾಹ್ನಕ್ಕೆ ಮುಂದೂಡಿಕೆ
Next articleಮಂಗಳೂರಿನ ಶಾಲೆಗಳಿಗೂ ಬಾಂಬ್ ಬೆದರಿಕೆ