ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭೆ ಕ್ಷೇತ್ರದ ಕೈ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿ ಇಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಕೆಲವೇ ಕ್ಷಣಗಳಲ್ಲಿನ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿಯ ಬಿಜೆಪಿ ಪಕ್ಷದ ಕಚೇರಿಯಲ್ಲಿ ಜೆ.ಪಿ. ನಡ್ಡಾ, ಧರ್ಮೇಂದ್ರ ಪ್ರಧಾನ, ಪ್ರಲ್ಹಾದ್ ಜೋಶಿ, ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ.